ವಿಜಯಪುರ

ಅರಕೇರಿ ದೇವಸ್ಥಾನದ ಕೆಲಸಗಾರನ ಭೀಕರ ಕೊಲೆ, ರಕ್ತದ ಮಡುವಿನಲ್ಲಿ ಕೆಡವಿ ಪರಾರಿಯಾದ ದುಷ್ಕರ್ಮಿಗಳು

ಸರಕಾರ ನ್ಯೂಸ್ ವಿಜಯಪುರ

ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇಲ್ಲಿನ ಅರಕೇರಿ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಪರಸಪ್ಪ ಗುಂಡಕರಜಗಿ (55) ಎಂದು ಗುರುತಿಸಲಾಗಿದೆ.

ಮೂಲತಃ ಬಸವನಬಾಗೇಬಾಡಿ ತಾಲೂಕಿನ ಕಾಮನಕೇರಿ ನಿವಾಸಿಯಾಗಿರುವ ಪರಸಪ್ಪ ಕೆಲವು ದಿನಗಳಿಂದ ಅಮೋಘಸಿದ್ದ ಮಂದಿರದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದನು. ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!