ನಮ್ಮ ವಿಜಯಪುರ

ವಿಜಯಪುರ ಜಿಪಂ ಸಿಇಒಗೆ ರಾಜ್ಯ ಪ್ರಶಸ್ತಿ, ಬೆಸ್ಟ್ ಪರ್ಫಾಮೆನ್ಸ್ ಅವಾರ್ಡ್‌ಗೆ ರಾಹುಲ್ ಶಿಂಧೆ ಭಾಜನ

ಸರಕಾರ ನ್ಯೂಸ್ ವಿಜಯಪುರ

ಮತದಾರರ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಚುನಾವಣೆ ಪ್ರಕ್ರಿಯೆಗಳನ್ನು ಪರಿಪೂರ್ಣವಾಗಿ ನಿಭಾಯಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ರಾಜ್ಯಮಟ್ಟದ ‘ಬೆಸ್ಟ್ ಪರ್ಫಾಮೆನ್ಸ್ ಅವಾರ್ಡ್’ಗೆ ಭಾಜನರಾಗಿದ್ದಾರೆ.

ಸತತವಾಗಿ ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಮೂಡಿಸುವವಲ್ಲಿ ಶಿಂಧೆ ಅವರು ಯಶಸ್ವಿಯಾಗಿದ್ದಾರೆ. ಭವಿಷ್ಯದ ಮತದಾರರು ಮತ್ತು ಯುವ ಮತದಾರರಾದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಯುವ ಮತದಾರರ ಹೊಸ ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿದ್ದಾರೆ. ವಿಜಯಪುರ ನಗರದಲ್ಲಿ ಸುಮಾರು 2000 ವಿದ್ಯಾರ್ಥಿಗಳನ್ನೊಳಗೊಂಡ ಕಾಲ್ನಡಿಗೆ ಜಾಥಾ ಹಮ್ಮಿಕೊಂಡು ಯುವ ಮತದಾರರಲ್ಲಿ ಅರಿವು ಮೂಡಿಸಿದ್ದಾರೆ. ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ಸಫಲರಾಗಿದ್ದಾರೆ.

ಈ ಎಲ್ಲ ಕಾರ್ಯಗಳನ್ನು ಪರಿಗಣಿಸಿ ರಾಜ್ಯ ಚುನಾವಣೆ ಆಯೋಗ ‘ಬೆಸ್ಟ್ ಪರ್ಫಾಮೆನ್ಸ್ ಆಸ್ ಜಿಲ್ಲಾ ಪಂಚಾಯಿತಿ ಸಿಇಒ’ ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ಜ. 25ರಂದು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜ್ಯ ಭವನದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

error: Content is protected !!