ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಕಂಪ್ಯೂಟರ್ ಮತ್ತಿತರ ಸಾಮಗ್ರಿ ಕಳವು…..ಎಲ್ಲಿ? ಹೇಗಾಯಿತು?
ಸರಕಾರ ನ್ಯೂಸ್ ಬ.ಬಾಗೇವಾಡಿ
ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು ಕಂಪ್ಯೂಟರ್ ಸೇರಿದಂತೆ ಒಟ್ಟು 10,300 ರೂ.ಮೌಲ್ಯದ ಸಾಮಗ್ರಿ ಕಳುವು ಮಾಡಲಾಗಿದೆ.
ಬಸವನಬಾಗೇವಾಡಿ ತಾಲೂಕಿನ ಹೂಣಶ್ಯಾಳ ಪಿಡಿ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ 5ನೇ ವರ್ಗದ ಕೋಣೆಯಲ್ಲಿ ಕಳ್ಳತನ ನಡೆದಿದೆ. ಈ ಬಗ್ಗೆ ಶಾಲೆ ಮುಖ್ಯಾಧ್ಯಾಪಕಿ ಸುಶೀಲಾಬಾಯಿ ಶಿವಪ್ಪ ಚಾಂದಕವಟೆ ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)