ವಿಜಯಪುರ

ಕುರಿ- ಮೇಕೆ ಘಟಕ ನಿರ್ಮಾಣಕ್ಕೆ ಸಹಾಯಧನ, ಅರ್ಜಿ ಸಲ್ಲಿಸಲು ಯಾರು ಅರ್ಹರು? ಇಲ್ಲಿದೆ ಡಿಟೇಲ್ಸ್

ಸರಕಾರ ನ್ಯೂಸ್ ವಿಜಯಪುರ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ (10+1) ಕುರಿ, ಮೇಕೆ ಘಟಕಗಳ ಅನುಷ್ಠಾನಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಸದಸ್ಯರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ವಿಜಯಪುರ ಅಥವಾ ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯವರಿಂದ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 24-02-2023ರೊಳಗೆ ಸಲ್ಲಿಸಬೇಕು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಲ್ಲಿ ನೋಂದಾಯಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವಿಜಯಪುರ ಕಚೇರಿ ಮೊಬೈಲ್ ಸಂಖ್ಯೆ: 9902363143 ಸಂಪರ್ಕಿಸುವಂತೆ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!