ವಿಜಯಪುರ

ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ : ಡಾ.ವಿಜಯಮಹಾಂತೇಶ ದಾನಮ್ಮನವರ

ಸರಕಾರ ನ್ಯೂಸ್ ವಿಜಯಪುರ

ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ನಡೆದ ವಿಡಿಯೋ ಕಾನ್ಫರೆನ್ಸಲ್ಲಿ ಮಾತನಾಡಿದ ಅವರು, ಜಿಲ್ಲೆಯ 8 ವಿಧಾನ ಸಭಾ ಮತಕ್ಷೇತ್ರಗಳಲ್ಲಿ ಸುಗಮವಾಗಿ ಮತದಾನ ನಡೆಯಲು ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲಾಗುತ್ತಿದೆ. ಮತದಾನ ಕುರಿತು ಅಗತ್ಯ ಕ್ರಮ ಕೈಗೊಂಡು ಹೆಚ್ಚಿನ ಮತದಾನಕ್ಕಾಗಿ ಪ್ರೆರೇಪಿಸಲಾಗುತ್ತಿದೆ. ದುರ್ಬಲ ವರ್ಗದ ಮತದಾರರ ಪಟ್ಟಿ ಎಲ್ಲ ಸೆಕ್ಟರ್ ಅಧಿಕಾರಿಗಳು ಸಿದ್ಧಪಡಿಸಿ ನೀಡಿದ್ದು, ಈ ಪಟ್ಟಿಯನ್ನು ಕ್ರೋಡಿಕರಿಸಲಾಗುತ್ತಿದೆ ಎಂದು ಹೇಳಿದರು.

`ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಂಸಿಸಿ ವಾಹನ ಜಿಪಿಎಸ್ ಅಳವಡಿಸುವ ಹಾಗೂ ಚೆಕ್ ಫೋಸ್ಟಗಳಲ್ಲಿ ಸಿಸಿಟಿವಿ ಅಳವಡಿಸಿ ನಿಗಾ ವಹಿಸಲಾಗಿದೆ. ಜಿಲ್ಲೆಯ ವಿವಿಧ ಚೆಕ್‍ಪೋಸ್ಟಗಳಲ್ಲಿ ತಪಾಸಣಗೊಳಪಡಿಸಿ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ದುರ್ಬಲ ವರ್ಗದವರ ಮತದಾನ ಮ್ಯಾಪಿಂಗ್ ಹಾಗೂ ಸೆಕ್ಟರ್ ಆಫೀಸರ್ ಭೇಟಿ ನೀಡುತ್ತಿದ್ದಾರೆ. ಮತದಾನದ ರೂಟ್ ಚಾರ್ಟ್ಸ ಅಭಿವೃದ್ಧಿಪಡಿಸಿದ ಹಾಗೂ ಮಾಡಬೇಕಾದ ಕಾರ್ಯಗಳ ಬಗ್ಗೆ,ಎಫಿಕ್ ಕಾರ್ಡಗಳನ್ನು ಮುದ್ರಿಸಿ ಹಂಚಿರುವ ಬಗ್ಗೆ ನಮೂನೆಗಳ ಪ್ರಗತಿ, ದೂರು ಕ್ರಮ ವಹಿಸಿದ ಸೋಶೀಯಲ್ ಮೀಡಿಯಾ ಕಣ್ಗಾವಲು ಕ್ರಮ, ಫೋಸ್ಟಲ್ ಬ್ಯಾಲೆಟ್, ಮತಗಟ್ಟೆ ಪ್ರಸ್ತಾವನೆ, ಸೌಲಭ್ಯ ಒದಗಿಸಿರುವ ಬಗ್ಗೆ ಹಾಗೂ ಸ್ವೀಪ್ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ನೀಡಿದರು.


ಜಿಲ್ಲೆಯಲ್ಲಿ ಸಿ-ವ್ಹಿಜಿಲ್ ತಂತ್ರಾಂಶ ಮೂಲಕ ಬರುವ ದೂರುಗಳ ಪರಿಹಾರಕ್ಕೆ ಕ್ರಮ ವಹಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸಲಾಗಿದೆ. ಚುನಾವಣಾ ವೀಕ್ಷಕರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶಿಷ್ಠಾಚಾರದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ನಗರ ಹಾಗೂ ಪಾಲಿಕೆ ಪ್ರದೇಶಗಳ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಚೇತನ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಹಾಗೂ ಯಾವುದೇ ಕಾರಣದಿಂದ ಮತದಾನದಿಂದ ದೂರ ಉಳಿಯದಂತೆ ನೋಡಿಕೊಳ್ಳಲು ಸ್ವೀಪ್ ಸಮಿತಿಯಿಂದ ಹಲವು ಕಾರ್ಯಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷ ಚೇತನ ಮತದಾರರ ಅನುಕೂಲಕ್ಕಾಗಿ ಮತಗಟ್ಟೆಗಳಲ್ಲಿ ವ್ಹೀಲ್ ಚೇರ್, ರ್ಯಾಂಪ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಅವರು ಮಾತನಾಡಿ, ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಜಿಲ್ಲೆಯಲ್ಲಿ ಸ್ಥಾಪಿಸಲಾದ ಎಲ್ಲಾ ಚೆಕ್ ಪೋಸ್ಟ್ಗ ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ. ಎಲ್ಲ ಚೆಕ್ ಪೋಸ್ಟಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಅಕ್ರಮಗಳ ಕಡಿವಾಣ ಹಾಕುವುದರೊಂದಿಗೆ ಶಾಂತ ರೀತಿಯಿಂದ ಚುನಾವಣೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯಲ್ಲಿ ಶೇ.85ರಷ್ಟು ಶಶಸ್ತ್ರಾಗಳನ್ನು ಜಮೆ ಮಾಡಿಕೊಳ್ಳಲಾಗಿದೆ. 5 ಸಿಆರ್‍ ಪಿಎಫ್ ತುಕಡಿ ನಾಳೆ ಜಿಲ್ಲೆಗೆ ಬರಲಿದೆ. ಭದ್ರತಾ ದೃಷ್ಟಿಯಿಂದ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ್ ಮುರಗಿ,ಅಬಕಾರಿ ಇಲಾಖೆಯ ಉಪ ಆಯುಕ್ತ ಬನಹಟ್ಟಿ ಜಿಲ್ಲಾ ಚುನಾವಣಾಧಿಕಾರಿಗಳು ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!