ವಿಜಯಪುರ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ, ದಾಖಲಾದ ಪ್ರಕರಣ ಎಷ್ಟು? ಡಿಸಿ ದಾನಮ್ಮನವರ ಹೇಳಿದ್ದೇನು?

ಸರಕಾರ ನ್ಯೂಸ್ ವಿಜಯಪುರ

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಹಲವು ಪ್ರರಣಗಳು ದಾಖಲಾಗಿವೆ. ಆರ್ ಪಿ ಆಕ್ಟ್ 127 ಎ ರಡಿ ನಿಗದಿತ ಘೋಷಣೆ ಮಾಡದ ಕರಪತ್ರ ಮುದ್ರಣಕ್ಕೆ ಒಂದು ಕೇಸ್ ಮತದಾರರ ಆಮೀಷ ಒಡ್ಡಿದಕ್ಕೆ ಸಂಬಂಧಿಸಿದಂತೆ ಎರಡು ಕೇಸ್‍ಗಳನ್ನು ಸೇರಿದಂತೆ ಎಂಸಿಸಿ ಅಡಿ 6 ಕೇಸ್‍ಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಮತಯಂತ್ರಗಳ ಮೊದಲನೇ ರ್ಯಾಂಡ್‍ಮೈಜೇಶನ್ ಈಗಾಗಲೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಕೈಗೊಳ್ಳಲಾಗಿದೆ. ಮತದಾನ ಮಾಡುವ ಮುಂಚೆ ಪೊಲಿಂಗ್ ಏಜೆಂಟ್ ಸಮ್ಮುಖದಲ್ಲಿ ಅಣಕು ಮತದಾನ ಮಾಡಲಾಗುವುದು. ಪಾರದರ್ಶಕ ಚುನಾವಣೆಗಾಗಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಇವಿಎಂ ಸಮಸ್ಯೆಗಳಿಲ್ಲ ಎಂದು ತಿಳಿಸಿದರು.

80 ವರ್ಷಕ್ಕೂ ಹೆಚ್ಚಿನ ವಯೋಮಾನದ 38 ಸಾವಿರ ಹಿರಿಯ ನಾಗರಿಕರಿದ್ದು, 20 ಸಾವಿರ ವಿಕಲಚೇತನ 12ಇ ಅಡಿಯಲ್ಲಿ ಕೆಲವು ಮನವಿ ಸ್ವೀಕರಿಸಲಾಗಿದೆ. ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಿ ಸಂಬಂಧಿಸಿದವರ ಮನೆಗೆ ತೆರಳಿ ಪಾರದರ್ಶಕವಾಗಿ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಸಂದರ್ಭ ರಾಜಕೀಯ ಏಜೆಂಟರಿಗೂ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಹಲವಾರು ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ದಿಸೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು.

ನಾಮಪತ್ರಗಳ ಸಲ್ಲಿಕೆ, ಈವರೆಗೆ ಸ್ವೀಕೃತವಾದ ನಾಮಪತ್ರಗಳು, ಈಗಾಗಲೇ ವೆಚ್ಚ ವೀಕ್ಷಕರು ಆಗಮಿಸಿದ್ದು, ಸಾಮಾನ್ಯ ವೀಕ್ಷಕರು ಇದೇ ತಿಂಗಳು ಜಿಲ್ಲೆಗೆ ಆಗಮಿಸಲಿದ್ದಾರೆ. ಇವಿಎಂಗಳನ್ನು ಎಫ್.ಎಲ್.ಸಿ. ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮಾಡಲಾಗಿದ್ದು, ಆನ್‍ಲೈನ್ ನಾಮಪತ್ರ ಸಲ್ಲಿಸುವ ಕುರಿತು ಸಂಬಂಧಿಸಿದ ತಂತ್ರಾಂಶದ ಮೂಲಕ ಭರ್ತಿ ಮಾಡಿ ಡೌನ್‍ಲೋಡ್ ಮಾಡಿಕೊಂಡು ಖುದ್ದಾಗಿ ಸಲ್ಲಿಸಬೇಕು ಸೇರಿದಂತೆ ಎಲ್ಲ ಅಗತ್ಯ ಮಾಹಿತಿ ನೀಡಿದ ಅವರು ಮುಕ್ತ, ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತದ ಸನ್ನದ್ಧವಾಗಿದೆ ಎಂದು ಹೇಳಿದರು.ಲಲ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ ಡಿ ಆನಂದ ಕುಮಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆಗಾಗಿ ಸಕಲ ಪೊಲೀಸ್ ಬಂದೋಬಸ್ತ ಮಾಡಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲೆಗೆ 5 ಸಶಸ್ತ್ರ ಸೇನಾ ಪಡೆಗಳು ತುಕಡಿಗಳು ಆಗಮಿಸಿವೆ. ಇನ್ನೂ 13 ಸೇನಾ ತುಕಡಿಗಳು ಜಿಲ್ಲೆಗೆ ಬರಲಿದ್ದು, ಒಟ್ಟಾರೆಯಾಗಿ 30 ಕೇಂದ್ರ ಮೀಸಲು ಪಡೆಗಳು ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿದೆ. ಸಾರ್ವಜನಿಕರು ನಿರ್ಭಿತಿಯಿಂದ ಮತದಾನ ಮಾಡುವ ನಿಟ್ಟಿನಲ್ಲಿ ಪೊಲೀಸ್ ಸೂಕ್ತ ಬಂದೊಬಸ್ತ ಕಲ್ಪಿಸಲಾಗಿದೆ. ಎಂದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಭಯದ ವಾತಾವರಣ ಇಲ್ಲ, ಮುಕ್ತವಾಗಿ ಚುನಾವಣೆ ನಡೆಸಲು ಎಲ್ಲ ಅಗತ್ಯ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ವಿಜಯಪುರ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ ಉಪಸ್ಥಿತರಿದ್ದರು.

error: Content is protected !!