ವಿಜಯಪುರ

ಚುನಾವಣೆ ಸೇವೆಗೆ ತೆರಳುತ್ತಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ- ಹೆಚ್ಚಿದ ಆಕ್ರೋಶ

ಸರಕಾರ ನ್ಯೂಸ್ ಮುದ್ದೇಬಿಹಾಳ

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ.

ಮಂಗಳವಾರ ಮುದ್ದೇಬಿಹಾಳದಿಂದ ಸಿಂದಗಿಗೆ ಕಡೆಗೆ ಚುನಾವಣೆ ಕರ್ತವ್ಯಕ್ಕೆ ಸಿಬ್ಬಂದಿ ಕರೆದೊಯ್ಯುವ ವೇಳೆ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚುನಾವಣೆ ಸೇವೆಗೆ ಸುಸಜ್ಜಿತ ಬಸ್ ಕಲ್ಪಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

error: Content is protected !!