ಎಬಿವಿಪಿ ಪ್ರತಿಭಟನೆ ವೇಳೆ ಗಲಾಟೆ, ಪೊಲೀಸರೊಂದಿಗೆ ಮಾತಿನ ಚಕಮಕಿ
ಸರಕಾರ ನ್ಯೂಸ್ ವಿಜಯಪುರ
ಶಕ್ತಿ ಯೋಜನೆಯಿಂದಾಗಿ ಸಕಾಲಕ್ಕೆ ಬಸ್ ಸೌಲಭ್ಯ ಸಿಗುತ್ತಿಲ್ಲವೆಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಬೃಹತ್ ಮೆರವಣಿಗೆ ಮೂಲಕ ಕೇಂದ್ರ ಬಸ್ ನಿಲ್ದಾಣ ತಲುಪಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆ ಹಿನ್ನೆಲೆ ಬಸ್ ನಿಲ್ದಾಣದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಕೆಲವರು ಬಸ್ ನಿಲ್ದಾಣದೊಳಕ್ಕೆ ನುಗ್ಗಲು ಯತ್ನಿಸಿದ್ದರಿಂದ ಪೊಲೀಸರು ತಡೆದರು. ಪರಸ್ಪರ ಮಾತಿನ ಚಕಮಕಿ ನಡೆಯಿತು.
ಆಕ್ರೋಶಗೊಂಡ ವಿದ್ಯಾರ್ಥಿಗಳು ಟೈಯರ್‌ಗೆ ಬೆಂಕಿ ಹಚ್ಚಲು ಯತ್ನಿಸಿದರು. ಬಳಿಕ ಪೊಲೀಸರು ತಡೆದು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವೊಲಿಸಿದರು. ಕೆಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು. ಈ ವೇಳೆ ತಲ್ಲಾಟ-ನೂಕಾಟ ಉಂಟಾಯಿತಾದರೂ ಯಾವುದೇ ಅನಾಹುತ ಸಂಭವಿಸಲಿಲ್ಲ. ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.