ರಾಜ್ಯ

ಅತಿಥಿ ಶಿಕ್ಷಕರ ಸೇವೆ ಖಾಯಂಗೊಳ್ಳುವುದೇ? ಸದನದಲ್ಲಿ ಶಿಕ್ಷಣ ಸಚಿವ ಹೇಳಿದ್ದೇನು?

ಸರಕಾರ ನ್ಯೂಸ್‌ ಬೆಂಗಳೂರ

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಹಳ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸೇವೆ ಖಾಯಂ ಆಗುವುದೇ? ಸೇವಾ ಹಿರಿತನ ಪರಿಗಣಿಸಿ ಇವರಿಗೆ ಸೇವಾ ಭದ್ರತೆ, ವೇತನ ಏರಿಕೆ ಮತ್ತಿತರ ಸೌಲಭ್ಯಗಳು ದೊರಕಲಿವೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಸದನದಲ್ಲಿ ಶಿಕ್ಷಣ ಸಚಿವ ಎಸ್‌.ಮಧುಬಂಗಾರಪ್ಪ ಹೇಳಿದ್ದೇನು? ಇಲ್ಲಿದೆ ನೋಡಿ ಡಿಟೇಲ್ಸ್‌.

ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ನಂಜೇಗೌಡ ಕೆ.ವೈ. ಅವರು ಮಂಡಿಸಿರುವ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿರುವ ಸಚಿವ ಎಸ್‌. ಮಧುಬಂಗಾರಪ್ಪ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಠಿಯಿಂದ ಪ್ರತಿ ವರ್ಷವೂ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ನೇಮಕ ಮಾಡಿಕೊಳ್ಳಲಾಗುತಿದೆ. ಈ ಹಿಂದೆ ಪ್ರಾಥಮಿಕ ಶಾಲೆ ಶಿಕ್ಷಕರಿಗೆ 7500 ರೂ. ಹಾಗೂ ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೆ 8000 ರೂ. ನೀಡಲಾಗುತ್ತಿತ್ತು. ಇದೀಗ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರಿಗೆ 10 ಸಾವಿರ ರೂ. ಹಾಗೂ ಪ್ರೌಢ ಶಾಲೆ ಶಿಕ್ಷಕರಿಗೆ 10500 ರೂ.ಹೆಚ್ಚಳ ಮಾಡಲಾಗಿದೆ.

ಮುಂದುವರಿದು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅವಕಾಶವಿದೆ. ನೇರ ನೇಮಕಾತಿಯಿಂದ ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಮಾತ್ರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ, ಅತಿಥಿ ಶಿಕ್ಷಕರನ್ನು ಖಾಯಂ ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

 

error: Content is protected !!