ಇಂಡಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸ್ಥಾಪಿಸಿ, ಸದನದಲ್ಲಿ ಶಾಸಕ ಯಶವಂತರಾಯಗೌಡ ಆಗ್ರಹ
ಸರಕಾರ ನ್ಯೂಸ್ ಬೆಂಗಳೂರ
ಇಂಡಿ ಪಟ್ಟಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರ ಕಚೇರಿ ಸ್ಥಾಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿರಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ ಈ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
ವಿಜಯಪುರ ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಂಡಿ ಪಟ್ಟಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಇಲ್ಲ. ಹೀಗಾಗಿ ಯಾವಾಗ ಮಂಜೂರು ಮಾಡಲಾಗುವುದೆಂದು ಪ್ರಶ್ನಿಸಿದ್ದಾರೆ.
ಶಿರಸಿ ಹಾಗೂ ಸಿಂಧನೂರ ಮತ್ತಿತರ ಭಾಗಗಳಲ್ಲಿ ಜಿಲ್ಲಾ ಕೇಂದ್ರ ಬಿಟ್ಟು ವಾಣಿಜ್ಯ ತೆರಿಗೆ ಇಲಾಖೆ ಸ್ಥಾಪಿಸಲಾಇದೆ. ಹೀಗಾಗಿ ಗಡಿಭಾಗದ ಇಂಡಿ ತಾಲೂಕಿನಲ್ಲಿಯೂ ವಾಣಿಜ್ಯ ತೆರಿಗೆ ಇಲಾಖೆ ಸ್ಥಾಪಿಸಬೇಕೆಂದರು. ಅಲ್ಲದೇ ಈ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಲು ಕೋರಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಿಗ್ಗಾಂವ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ನೋಂದಾಯಿತ ಟ್ರೇಡರ್ಸ್ ಎಲ್ಲಿ 5000ಕ್ಕಿಂತ ಹೆಚ್ಚಿಗೆ ಇದ್ದಲ್ಲೆಲ್ಲ ವಾಣಿಜ್ಯ ತೆರಿಗೆ ಇಲಾಖೆ ಮಾಡಬೇಕೆಂಬುದು ನನ್ನ ಅಭಿಪ್ರಾಯ. ವಿಜಯಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರೇಡರ್ಸ್ ಇದ್ದಾರೆ. ಹೀಗಾಗಿ ಅಲ್ಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವಕಾಶವಿದ್ದರೆ ಇಂಡಿಯಲ್ಲೂ ಪರಿಶೀಲಿಸುವುದಾಗಿ ಭರವಸೆ ನೀಡಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)