ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ನಿಧನ
ಸರಕಾರ ನ್ಯೂಸ್ ವಿಜಯಪುರ
ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್‌ಪಿ ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಅರುಣ ನಾಯಕ್ ಮೃತರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅನಿತಾ ಹದ್ದಣ್ಣವರ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದರು.
ಮೃತ ಅರುಣ ನಾಯಕ್‌ಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ.