ಗ್ರಾಮ ಪಂಚಾಯತ್ ಚುನಾವಣೆ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ಸರಕಾರ ನ್ಯೂಸ್ ವಿಜಯಪುರ
ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಹಾಗೂ ಉಪ ಚುನಾವಣೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತದಾನ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು 144ರನ್ವಯ ಪ್ರತಿಬಂಧಕಾಜ್ಞೆಯನ್ನು ವಿಧಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ,ಬಳಬಟ್ಟಿ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಮತ್ತು ಇಂಡಿ ತಾಲೂಕಿನ ಅಂಜುಟಗಿ ಗ್ರಾಮ ಪಂಚಾಯತಿಗಳಿಗೆ ದಿನಾಂಕ : 23-07-2023 ರಂದು ಮತದಾನ ನಡೆಯಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶವನ್ನು ದಿನಾಂಕ : 21-07-2023ರ ಸಂಜೆ 5 ಗಂಟೆಯಿಂದ ದಿನಾಂಕ : 23-07-2023 ರ ಸಂಜೆ 5 ಗಂಟೆಯವರೆಗೆ ನಿಷೇಧಿತ ಪ್ರದೇಶವೆಂದು ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.