ಅಂಗನವಾಡಿ- ಶಾಲೆ- ಕಾಲೇಜ್ ಗಳಿಗೆ ರಜೆ ಘೋಷಣೆ; ಡಿಸಿ ಆದೇಶ
ಸರಕಾರ ನ್ಯೂಸ್ ವಿಜಯಪುರ
ವಿಜಯಪುರ ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇಂದು (ಜುಲೈ 27) ಸಹ ಮಳೆ ಸುರಿಯುವ ಸಂಭವ ಇರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ಗುರುವಾರ (ಜುಲೈ27) ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಆದೇಶಿಸಿದ್ದಾರೆ.
ಎಲ್ಲ ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮಾ, ಇಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿರುವುದಿಲ್ಲ. ಎಂದಿನಂತೆ ತರಗತಿ ನಡೆಯಲಿವೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.