ವಿಜಯಪುರ

ಹೂಗುಚ್ಛ-ಬದಲಿಗೆ ಪುಸ್ತಕ ನೀಡಿ ಗೌರವಿಸಿ; ಡಿಸಿ ಭೂಬಾಲನ್ ಹೀಗೆ ಹೇಳಿದ್ದೇಕೆ ಗೊತ್ತಾ?

ಸರಕಾರ ನ್ಯೂಸ್‌ ವಿಜಯಪುರ

ವಿವಿಧ ಇಲಾಖೆಯ ಮೇಲಾಧಿಕಾರಿಗಳು ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನೀಡಿದಾಗ ಅಥವಾ ಅಧಿಕಾರಿ-ನೌಕರರು ಮೇಲಾಧಿಕಾರಿಗಳನ್ನು ಭೇಟಿಯಾಗಲು ಕಚೇರಿಗೆ ಹೋದಾಗ ಅಧಿಕಾರಿಗಳಿಗೆ ಹೂಗುಚ್ಛ, ಹಾರ, ಹಣ್ಣಿನ ಬುಟ್ಟಿ, ಶಾಲು ಬದಲಾಗಿ ಕಿಂಗ್ ಸೈಜಿನ್ ನೋಟ್ ಬುಕ್ ಅಥವಾ ಸಾಮಾನ್ಯ ಜ್ಞಾನ, ಮಹಾನ್ ಪುರುಷರ, ಸ್ವತಂತ್ರ್ಯ ಹೋರಾಟಗಾರರ, ವಿಜ್ಞಾನಿಗಳ, ಎನ್‌ಸೈಕ್ಲೋಪಿಡಿಯಾ ನಿಘಂಟು ನೋಟ್‌ಬುಕ್-ಪುಸ್ತಕಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದ್ದಾರೆ.
ಹೂಗುಚ್ಛ, ಶಾಲು ಬದಲಾಗಿ ಪುಸ್ತಕಗಳನ್ನು ನೀಡಿ ಗೌರವಿಸಬಹುದಾಗಿದೆ. ಸಂಗ್ರಹವಾದ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಹಾಗೂ ಕಿಂಗ್‌ಸೈಜ್ ನೋಟ್‌ಬುಕ್‌ಗಳನ್ನು ಬಡ ಕುಟುಂಬದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ-ಜ್ಞಾನದ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಅಧಿಕಾರಿ-ಸಿಬ್ಬಂದಿ ವರ್ಗಗಳಿಗೆ ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರಿಗೂ ತಿಳಿವಳಿಕೆ ನೀಡಲು ಸೂಚಿಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!