ವಿಜಯಪುರ

ಎಸ್ ಸಿ- ಎಸ್ ಟಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ…ಹೆಚ್ಚಿನ ವಿವರ ಇಲ್ಲಿದೆ ನೋಡಿ….

ಸರಕಾರ ನ್ಯೂಸ್ ವಿಜಯಪುರ

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ 2022ನೇ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಕ್ರೀಡಾಪಟುಗಳಿಗೆ ಪ್ರೊತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : 31-08-2023ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:08352-251085, ಮೊ:9480886555 ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!