ಅತಿಥಿ ಶಿಕ್ಷಕ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ, ಹೆಚ್ಚುವರಿ ಹುದ್ದೆ ಭರ್ತಿಗೆ ಸರ್ಕಾರ ಆದೇಶ….ಇಲ್ಲಿದೆ ಫುಲ್ ಡಿಟೇಲ್ಸ್
ಸರಕಾರ ನ್ಯೂಸ್ ಬೆಂಗಳೂರ
2023-24ನೇ ಶೈಕ್ಷಣಿಕ ಸಾಲಿಗೆ ರಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹೆಚ್ಚುವರಿಯಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶಿಸಿದೆ.
ಒಟ್ಟು 10,000 ಅತಿಥಿ ಶಿಕ್ಷಕರನ್ನು ಹೆಚ್ಚುವರಿಯಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 8000 ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ 2000 ಸೇರಿ ಒಟ್ಟು 10,000 ಅತಿಥಿ ಶಿಕ್ಷಕರನ್ನು ಹೆಚ್ಚುವರಿಯಾಗಿ ನೇಮಿಸಿಕೊಳ್ಳಲು ಆದೇಶಿಸಲಾಗಿದೆ.
ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಕೌನ್ಸಲಿಂಗ್ ಮೂಲಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೌನ್ಸಿಲಿಂಗ್ ಮೂಲಕ ಖಾಲಿಯಾಗಿರುವ ಹುದ್ದೆಗಳನ್ನು ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೇಗಳನ್ನು ಆದ್ಯತೆ ಮೇರೆಗೆ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರಿಂದ ಭರ್ತಿ ಮಾಡಲು ಕ್ರಮ ವಹಿಸುವುದು.
ಮೇಲ್ಕಂಡಂತೆ 2023-24 ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಒಟ್ಟು 10,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ/ ತಾಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಸರ್ಕಾರದ ಈ ಆದೇಶಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘ ಅಭಿನಂದನೆ ಸಲ್ಲಿಸಿದ್ದಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.