ಸಾಹಿತ್ಯ

ಸಾಹಿತಿ ಅನೀಲ ಗುನ್ನಾಪುರ ಕಥಾ ಸಂಕಲನಕ್ಕೆ ರಾಜ್ಯ ಪ್ರಶಸ್ತಿ, ರಾಯಚೂರಿನಲ್ಲಿ ಸನ್ಮಾನ, ಪ್ರಶಸ್ತಿ ಪ್ರದಾನ

ವಿಜಯಪುರ: ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಯುವ ಸಾಹಿತಿ ಅನೀಲ ಗುನ್ನಾಪುರ ಇವರ ‘ಕಲ್ಲು ಹೂವಿನ ನೆರಳು’ ಕಥಾ ಸಂಕಲನ ರಾಜ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಭಾನುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಪ್ರಾರ್ಥನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರಾರ್ಥನಾ ಸಾಹಿತ್ಯ ಪುರಸ್ಕಾರಕ್ಕೆ ‘ಕಲ್ಲು ಹೂವಿನ ನೆರಳು’ ಭಾಜನವಾಗಿತ್ತು. ಇದೀಗ ನಡೆದ ಅದ್ದೂರಿ ಸಮಾರಂಭದಲ್ಲಿ ಅನೀಲ ಗುನ್ನಾಪುರ ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿಯು 5 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!