ನೇರಗುತ್ತಿಗೆಯಡಿ ನೇಮಕಾತಿಗೆ ಅರ್ಜಿ ಕರೆ; ಇಲ್ಲಿದೆ ಫುಲ್ ಡಿಟೇಲ್ಸ್
ಸರಕಾರ ನ್ಯೂಸ್ ವಿಜಯಪುರ
ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ತಜ್ಞವೈದ್ಯರು ಮತ್ತು ಎಂಬಿಬಿಎಸ್ ವೈದ್ಯರನ್ನು ನೇರ ಸಂದರ್ಶನ ಮೂಲಕ ನೇಮಕಾತಿಯನ್ನು ಪ್ರತಿ ಬುಧವಾರ ಬೆಳಗ್ಗೆ 10 ರಿಂದ 1.30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ನಡೆಸಲಾಗುತ್ತದೆ. ಹೀಗಾಗಿ ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ತಜ್ಞವೈದ್ಯರು- 2 (ಶಸ್ತ್ರ ಚಿಕಿತ್ಸಕರು ಜಿಲ್ಲಾ ಆಸ್ಪತ್ರೆ, ಮನೋರೋಗ ತಜ್ಞರು ಸಾರ್ವಜನಿಕ ಆಸ್ಪತ್ರೆ ಸಿಂದಗಿ) ಎಂಬಿಬಿಎಸ್ ವೈದ್ಯರು- 21 ( 6 ನಮ್ಮ ಕ್ಲೀನಿಕ್, 15- ಏನ್‌ಎಚ್‌ಎಂ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ) ಗುತ್ತಿಗೆ ಆಧಾರದಡಿ, ಎನ್‌ಎಚ್‌ಎಂ ಮಾರ್ಗಸೂಚಿಯನ್ವಯ ನಿಯಮಾನುಸಾರ ನೇರ ಸಂದರ್ಶನ ಮುಖಾಂತರ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿರುವ ಆರ್.ಸಿಎಚ್ ವಿಭಾಗದಲ್ಲಿ ಕಾರ್ಯಾಲಯದ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)