ಈದ್ ಮಿಲಾದ್ ಮೆರವಣಿಗೆ ವೇಳೆ ಅವಾಂತರ, ಶಾಸಕ ಯತ್ನಾಳ ಬ್ಯಾನರ್‌ಗೆ ಧಕ್ಕೆ, ದಾಖಲಾಯಿತು ಎಫ್‌ಐಆರ್…!
ಸರಕಾರ ನ್ಯೂಸ್ ವಿಜಯಪುರ
ಈದ್ ಮಿಲಾದ್ ಮೆರವಣಿಗೆ ಸಂದರ್ಭ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಬ್ಯಾನರ್ ಹರಿದ ಕಡಿಗೇಡಿಗಳ ಮೇಲೆ ಕೊನೆಗೂ ಎಫ್‌ಐಆರ್ ದಾಖಲಾಗಿದೆ.
ಗುರುವಾರ ಈದ್ ಮಿಲಾದ್ ಪ್ರಯುಕ್ತ ವಿಜಯಪುರದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೆಲವು ಕಿಡಿಗೇಡಿಗಳು ಶಾಸಕ ಬಸನಗೌಡ ಪಾಟೀಲ ಯತ್ನಾಳರ ಬ್ಯಾನರ್‌ಗೆ ಧಕ್ಕೆಯುಂಟು ಮಾಡಿದ್ದಾರೆ. ಧಾರ್ಮಿಕ ಧ್ವಜ ಬಳಸಿ ಬ್ಯಾನರ್ ಹರಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಿಡಿಗೇಡಿಗಳನ್ನು ಚದುರಿಸಿದ್ದಾರೆ. ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಯತ್ನಾಳ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಗಾಂಧಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ಧಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)