ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಮಾಹಿತಿಗಾಗಿ ಈ ವರದಿ ನೋಡಿ
ಸರಕಾರ ನ್ಯೂಸ್ ವಿಜಯಪುರ
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ದಿ ಯೋಜನೆ, (ಮೈಕ್ರೋ ಕ್ರೆಡಿಟ್ ಫೈನಾನ್ಸ್), ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಪ್ರೇರಣಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ದಿನಾಂಕ : 29-11-2023 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಸೇವಾ ಸಿಂಧು ಪೋರ್ಟ್‍ಲ್‍ನಲ್ಲಿ https://sevasindhu.karnataka.gov.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)