ಅಲೆಮಾರಿ ಅಭಿವೃದ್ದಿ ನಿಗಮದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಸರಕಾರ ನ್ಯೂಸ್ ವಿಜಯಪುರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆಯಡಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ, ಕರ್ನಾಟಕ ಒನ್, ಗ್ರಾಮ ಒನ್‍ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 30-11-2023 ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಮಾಹಿತಿಗಾಗಿ ಈ ವರದಿ ನೋಡಿ
(ಕ್ಷಣ ಕ್ಷಣದ ಮಹತ್ವದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)