ಅಲಿಯಾಬಾದ್ ಅವಘಡ: ಸತ್ತವರೆಷ್ಟು? ಬದುಕಿದ್ದು? ಮಧ್ಯರಾತ್ರಿ ಸಚಿವ ಎಂ.ಬಿ. ಪಾಟೀಲ ಭೇಟಿ ನೀಡಿ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್
ಸರಕಾರ ನ್ಯೂಸ್ ವಿಜಯಪುರ
ಮೆಕ್ಕೆಜೋಳ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಬೃಹತ್ ತೊಟ್ಟಿ ಕುಸಿದು ಹತ್ತಕ್ಕೂ ಅಧಿಕ ಕಾರ್ಮಿಕರು ಜೀವನ್ಮಧ್ಯೆ ಹೋರಾಡುತ್ತಿದ್ದ ಪ್ರಕರಣ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ !
ತಡರಾತ್ರಿವರೆಗೆ ನಡೆದ ಕಾರ್ಯಾಚರಣೆಯಲ್ಲಿ ಈಗಾಗಲೇ ಐವರು ಧಾರುಣ ಸಾವು ಕಂಡಿದ್ದಾರೆ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಹಾರ ಮೂಲದ ಕಾರ್ಮಿಕರಾದ ರಾಜೇಶ್ ಮುಖಿಯಾ (25), ರಾಮ್ರೀಜ್ ಮುಖಿಯಾ (29), ಸಂಬೂ ಮುಖಿಯಾ (26)
ರಾಮ್ ಬಾಲಕ್ (52), ಲುಖೋ ಜಾಧವ್ (45) ಎಂಬುವರ
ಶವಗಳನ್ನು ಹೊರತೆಗೆಯಲಾಗಿದೆ. ಪುಣೆಯಿಂದ ಎನ್ ಡಿಆರ್ ಎಫ್ ತಂಡ ಬಂದಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಸಚಿವ ಎಂ.ಬಿ. ಪಾಟೀಲ ಭೇಟಿ:
ಅಲಿಯಾಬಾದ್ ಕೈಗಾರಿಕೆ ವಲಯದಲ್ಲಿ ಅವಘಡ, ನಾಲ್ವರ ರಕ್ಷಣೆ, ಡಿಸಿ ಭೂಬಾಲನ್ ಫಸ್ಟ್ ರಿಯಾಕ್ಷನ್ ಏನಿತ್ತು ಗೊತ್ತಾ?
ಬೆಳಗಾವಿ ಅಧಿವೇಶನದಲ್ಲಿದ್ದ ಸಚಿವ ಎಂ.ಬಿ. ಪಾಟೀಲ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದರು. ತಡರಾತ್ರಿ ಕೈಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಮಿಕರ ರಕ್ಷಣೆಗೆ ಸುರಕ್ಷಿತ ಕಾರ್ಯಾಚರಣೆ ಕೈಗೊಳ್ಳಲು ಸೂಚಿಸಿದರು. ಜಿಲ್ಲಾಡಳಿತ ಹಾಗೂ ಕಾರ್ಯಾಚರಣೆ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)