ಬೆಳ್ಳೆಂಬೆಳಗ್ಗೆ ಹೊತ್ತಿ ಉರಿದ ಬಸ್, ಸುಟ್ಟು ಕರಕಲಾದ ಬಸ್ ನಲ್ಲಿದ್ದವರು ಎಷ್ಟು ಜನ? ಯಾರಿಗೆ ಏನಾಯಿತು? ಇಲ್ಲಿದೆ ಶಾಕಿಂಗ್ ನ್ಯೂಸ್
ಸರಕಾರ ನ್ಯೂಸ್ ವಿಜಯಪುರ
ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಬೆಳ್ಳೆಂಬೆಳಗ್ಗೆ ಖಾಸಗಿ ಬಸ್ ಹೊತ್ತಿ ಉರಿದಿದೆ.
ಹಿಟ್ಟಿನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ -50 ರಲ್ಲಿ ಬೆಳಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ನ ಟೈಯರ್ ಬ್ಲಾಸ್ಟ್ ಆಗಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಬಸ್ ನಲ್ಲಿ ಅಂದಾಜು 30 ಕ್ಕೂ ಅಧಿಕ ಪ್ರಯಾಣಿಕರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೈಯರ್ ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಬಳಿಕ ಬೆಂಕಿ ಕ್ರಮೇಣ ತನ್ನ ಕೆನ್ನಾಲಿಗೆ ಚಾಚಿದೆ. ಪ್ರಯಾಣಿಕರು ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಘಟನೆಯಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
(ಕ್ಷಣ ಕ್ಷಣದ ಸುದ್ದಿ ಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)