ಬಿಜೆಪಿ ಶಾಸಕ ಯತ್ನಾಳ ಮೂರನೇ ಟಿಪ್ಪು ಸುಲ್ತಾನ್, ಸಚಿವ ಎಂ.ಬಿ. ಪಾಟೀಲ ತಿರುಗೇಟು
ಸರಕಾರ ನ್ಯೂಸ್ ವಿಜಯಪುರ
ಟಿಪ್ಪು ಸಲ್ತಾನ್ ಕಾರ್ಯಕ್ರಮ ದಲ್ಲಿ ಯತ್ನಾಳರೇ ಭಾಗವಹಿಸಿದ್ದಾರೆ. ಆ ಫೋಟೋ ಇದೆ. ಹೀಗಾಗಿ ಅವರೇ ಮೂರನೇ ಟಿಪ್ಪು ಸುಲ್ತಾನ್ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯಿಸಿದರು.
ಸಿಎಂ ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಯತ್ನಾಳ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗಿಯಾಗಿರುವ ಫೋಟೊ ಎಲ್ಲೆಡೆ ಹರಿದಾಡುತ್ತಿದೆ. ಹೀಗಾಗಿ ಅವರೇ ಮೂರನೇ ಟಿಪ್ಪು ಸುಲ್ತಾನ್ ಎಂದು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ದ ಹೋರಾಡಿದ ವ್ಯಕ್ತಿ. ಆ ಇತಿಹಾಸ ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ್ಲ.
ದೇಶದ ಸ್ವಾತಂತ್ರ್ಯ ಕ್ಕೆ
ಬಿಜೆಪಿ ಮತ್ತು ಆರ್ ಎಸ್ ಎಸ್ ಕೊಡುಗೆ ಏನೂ ಇಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಇವರೆಲ್ಲರೂ ಬ್ರಿಟಿಷರ ಪರವಾಗಿ ಇದ್ದರು ಎಂಬುದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ತಿಳಿದು ಬರುತ್ತದೆ.
ಕಾಂಗ್ರೆಸ್ ಮಾತ್ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ವೀರ ಮರಣವನ್ನಪ್ಪಿದವರಲ್ಲಿ ಹಿಂದು, ಮುಸ್ಲಿಂ, ಸಿಖ್ ರೂ ಇದ್ದಾರೆ. ಆದರೆ ಇದೀಗ ಬಂದು ಬಿಜೆಪಿ, ಆರ್ ಎಸ್ ಎಸ್ ನವರು ದೇಶ ಹಾಗೂ ಸ್ವಾತಂತ್ರ್ಯ ಬಗ್ಗೆ ಮಾತನಾಡಿರುವುದು ಖೇದಕರ ಎಂದರು.
ಇನ್ನು ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಶಾಲೆ- ಕಾಲೇಜ್ ಗಳಲ್ಲಿ ಜಾತಿ, ಧರ್ಮದ ವಿಷಯ ಬರಬಾರದು. ಹಿಜಾಬ್ ಗದ್ದಲ ಬರುವ ಮುಂಚೆ ಶಾಲೆ- ಕಾಲೇಕ್ ಹೇಗಿದ್ದವೋ ಹಾಗಿರಲಿ ಎಂದು ಆಶಿಸಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)