ವಿಜಯಪುರ

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬಂದಿಲ್ಲವೇ? ಹಾಗಿದ್ದರೆ ನಿಮ್ಮೂರಿಗೆ ಬರಲಿದ್ದಾರೆ ಅಧಿಕಾರಿಗಳು….ಸಿಇಒ ರಾಹುಲ್‌ ಶಿಂಧೆ ಹೇಳಿದ್ದೇನು?

ಸರಕಾರ ನ್ಯೂಸ್‌ ವಿಜಯಪುರ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ಗೆ ತಾಂತ್ರಿಕ ತೊಂದರೆಗಳಿಂದಾಗಿ ಹಣ ಜಮಾ ಆಗದೇ ಇರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರ ಆಯೋಜಿಸುತ್ತಿರುವುದಾಗಿ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಜಿಲ್ಲೆಯ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ತೊಂದರೆಗಳಿಂದ ಖಾತೆಗಳಿಗೆ ಹಣ ಜಮಾ ಆಗದೇ ಇರುವುದರಿಂದ ಸಮಸ್ಯೆ ನಿವಾರಣೆಗಾಗಿ ಡಿ.27 ರಿಂದ 29ರವರೆಗೆ ಜಿಲ್ಲೆಯ 211 ಗ್ರಾಪಂಗಳಲ್ಲಿ ಶಿಬಿರ ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ 1999 ಫಲಾನುಭವಿಗಳ ಇ-ಕೆವೈಸಿ ಜೋಡಣೆ, ಎನ್‌ಪಿಸಿಐ ಫೇಲ್ಡ್ ಅಪ್ಲಿಕೇಶನ್-12464, ಕೆ-2 ಫೇಲ್ಡ್ ಅಪ್ಲಿಕೇಶನ್-3286 ಸೇರಿ ಒಟ್ಟು 17,149 ಗೃಹಲಕ್ಷ್ಮಿ ಫಲಾನುಭವಿಗಳ ತಾಂತ್ರಿಕ ಸಮಸ್ಯೆಗಳು ಕಂಡುಬಂದಿವೆ. ಗ್ರಾಪಂ ಪಿಡಿಒ ನೇತೃತ್ವದಲ್ಲಿ ಶಿಬಿರ ಆಯೋಜಿಸಲಾಗುತ್ತಿದ್ದು, ಎಲ್ಲ ತಾಂತ್ರಿಕ ಮತ್ತು ಬ್ಯಾಂಕ್ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಇಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇಡಿಸಿಎಸ್) ತಂಡಗಳು ಈ ಶಿಬಿರದಲ್ಲಿ ಭಾಗವಹಿಸಬೇಕು. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ‌ ಮೂರನೇ ಟಿಪ್ಪು ಸುಲ್ತಾನ್, ಸಚಿವ ಎಂ.ಬಿ. ಪಾಟೀಲ ತಿರುಗೇಟು

ಪ್ರತಿ ಗ್ರಾಪಂ ಕಚೇರಿಗಳಲ್ಲಿ ಡಿ.27 ರಿಂದ 29 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಶಿಬಿರ ನಡೆಯಲಿದೆ. ಇಡಿಸಿಎಸ್ ವಿಭಾಗದವರು ಎಸ್‌ಎಂಎಸ್ ಮೂಲಕ ಫಲಾನಿಭವಿಗಳಿಗೆ ಮಾಹಿತಿ ನೀಡಲಿದ್ದಾರೆ. ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು. ಇ-ಕೆವೈಸಿ ಅಪ್ಡೇಟ್ ಮಾಡುವುದು, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲಿಸುವುದು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವಂತೆ ಅವರು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೂ 5,20,906 ರ ಪೈಕಿ 4,61,159 ಮಹಿಳಾ ಕುಟುಂಬಗಳು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ ರೂ.2000 ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಪ್ರಕ್ರಿಯೆಯಲ್ಲಿ ಹಲವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಮಾಡದೇ ಇರುವುದು ಹಾಗೂ ನಿಷ್ಕ್ರೀಯ ಖಾತೆಗೆಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡುಬಂದಿದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು, ಹಾಗೆಯೇ ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಮಾಡುವುದು ಅಗತ್ಯವಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!