ವಿಜಯಪುರ

ಬಿಜೆಪಿ ಭ್ರಷ್ಟಾಚಾರ ಬಯಲಿಗೆಳೆದ ಯತ್ನಾಳ, ಚೌಕಿದಾರ ವಿರುದ್ದ ತಿರುಗಿ ಬಿದ್ದ ಕಾಂಗ್ರೆಸ್, ನ ಖಾವೂಂಗಾ ನಾ ಖಾನೆ ದೂಂಗಾ ಎಂದರೆ ಇದೇನಾ? ಎಂದ ಸಿಎಂ ಸಿದ್ದರಾಮಯ್ಯ

ಸರಕಾರ ನ್ಯೂಸ್ ವಿಜಯಪುರ

ಕೋವಿಡ್ ಸಮಯದಲ್ಲಿ ಮಾಸ್ಕ್ ಮತ್ತು ಬೆಡ್ ಹಂಚಿಕೆಯಲ್ಲಿ ಸರಿಸಮಾರು 40 ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ ಎಂದು ತಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಟ್ಟಿರುವ ಬಾಂಬ್ ಭರ್ಜರಿ ಸದ್ದು ಮಾಡುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ “ಚೌಕಿದಾರ್” ವಿರುದ್ದ ತಿರುಗಿ ಬಿದ್ದಿದೆ. ಈ ಬಗ್ಯೆ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರೊನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ ಎಂಬ ಶಾಸಕ ಯತ್ನಾಳ ರ ಆರೋಪಕ್ಕೆ ಬಿಜೆಪಿ ಕೇಂದ್ರ ನಾಯಕರೇಕೆ ಸುಮ್ಮನಿದ್ದಾರೆ? ಇದರಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಬಿಜೆಪಿ ಅವಧಿಯಲ್ಲಿ ಶೇ.40 ರಷ್ಟು ಕಮೀಷನ್ ದಂಧೆ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಯತ್ನಾಳ ನಮ್ಮ ಆರೋಪಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನ ಸೌಧದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!