ಜ್ಞಾನದೇಗುಲಗಳಲ್ಲಿ ಹೊಸ ಸ್ಲೋಗನ್, ಕಾಂಗ್ರೆಸ್ ನಿರ್ಧಾರದ ಪರ- ವಿರೋಧ ಚರ್ಚೆ…..ಏನಿದು ಹೊಸ ವರಸೆ?
ಸರಕಾರ ನ್ಯೂಸ್ ಮುದ್ದೇಬಿಹಾಳ
ಶಾಲೆ-ಕಾಲೇಜ್ ಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಕೂಡದೆಂಬ ರಾಜ್ಯ ಸರ್ಕಾರದ ಆದೇಶ ಹಿನ್ನೆಲೆ ಎಲ್ಲ ಶಾಲೆ – ಕಾಲೇಜ್ ವಸತಿ ನಿಲಯಗಳ ನಾಮಫಲಕಗಳು ಬದಲಾಗುತ್ತಿವೆ.
ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಬರದಾದ ಕುವೆಂಪು ಅವರ ಬರಹ ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂಬ ಬರಹ ತಿದ್ದಲಾಗಿದ್ದು, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬರೆಯಲಾಗಿದೆ.
ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂಬ ಉದ್ದೇಶದಿಂದ ಬರಹ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ವಸತಿ ನಿಲಯದಲ್ಲಿ ಇಂಥ ಬರಹ ಕಂಡು ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಸರ್ಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ದೈರ್ಯವಾಗಿ ಪ್ರಶ್ನೆ ಮಾಡಲಿ.
ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶವಾಗಿದೆ ಎಂದು ಹೇಳಿದರು.