Uncategorized

ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ, ಯಾವುದಕ್ಕೆ ಎಷ್ಟು ಹಣ ಬಿಡುಗಡೆ ಗೊತ್ತಾ?

ಸರಕಾರ ನ್ಯೂಸ್ ವಿಜಯಪುರ

ಜಿಲ್ಲೆಯ ತೊಗರಿ ಬೆಳೆಗಾರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ.

2023-2024ನೆ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ-ಫಸಲ್ ಬಿಮಾ ಯೋಜನೆಯಡಿ ವಿಜಯಪುರ ಜಿಲ್ಲೆಯ ತೊಗರಿ ಬೆಳೆಗಾರರಿಗೆ 85.50 ಕೋಟಿ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ 13 ತಾಲೂಕಿನ ಮಳೆಯಾಶ್ರಿತ ತೊಗರಿಗೆ ಬೆಳೆವಿಮೆ ಮಾಡಿಸಿದ ರೈತರಿಗೆ ವಿಮಾ ನಷ್ಟದ ಪರಿಹಾರದಲ್ಲಿ 25% ಹಣವನ್ನು ರೈತರಿಗೆ ನೀಡಲು ಸರ್ಕಾರ ಆದೇಶ ಹೊರಡಿಸಲಾಗಿತ್ತು. ಅದರಂತೆ ಜಿಲ್ಲೆಯ ತೊಗರಿ ಬೆಳೆದ ರೈತರ ಖಾತೆಗೆ 85.50 ಕೋಟಿ ಬೆಳೆಗೆ ವಿಮೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.

(ಕ್ಷಣ‌ಕ್ಷಣದ ಮಹತ್ವದ ಸುದ್ದಿಗಳಿಗಾಗ) ಸರಕಾರ‌ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!