ವಿಜಯಪುರ

ಜಿಗಜಿಣಗಿ ಪರ ಯತ್ನಾಳ ಭರ್ಜರಿ ಪ್ರಚಾರ, ಭಾಷಣದಲ್ಲಿ ಹೇಳಿದ್ದೇನು ಗೊತ್ತಾ?

ಸರಕಾರ ನ್ಯೂಸ್ ವಿಜಯಪುರ

ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ದೇಶದಲ್ಲಾದ ಬದಲಾವಣೆ, ಸಾಧನೆ, ಆರ್ಥಿಕ ಸುಧಾರಣೆ, ಜಾಗತಿಕ ಮನ್ನಣೆ, ಭ್ರಷ್ಟಾಚಾರ ರಹಿತ ಆಡಳಿತ ಜನಮನ ಗೆದ್ದು ಇಂದು ಮತ್ತೊಮ್ಮೆ ದೇಶಕ್ಕೆ‌ ಮೋದಿ ಆಡಳಿತ ಬರಬೇಕೆಂಬುದು ಇಡಿ ದೇಶದ ಕೂಗಾಗಿದೆ. ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಪಾಲಿಕೆಯ ಐದು ವಾರ್ಡ್ ಗಳ ವ್ಯಾಪ್ತಿಯ ಪಂಡಿತ ದೀನ್ ದಯಾಳ ಉಪಾಧ್ಯಾಯ ಮಹಾಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ‌ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್ಸಿಗರಿಗೆ ಮೋದಿ‌ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಸಿಗುತ್ತಿಲ್ಲ. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ರಹಿತ‌ ಆಡಳಿತ, ಅಭಿವೃದ್ಧಿ ಪರ್ವ ಕಾಂಗ್ರೆಸ್ಸಿಗರ ಬಾಯಿ ಕಟ್ಟಿ ಹಾಕಿದೆ. ದೇಶದಲ್ಲಿ ಮೊದಲು‌ 400 ವಿಶ್ವವಿದ್ಯಾಲಯಗಳಿದ್ದವು, ಆದರೆ ಕಳೆದ 10 ವರ್ಷಗಳಲ್ಲಿ 1100 ವಿವಿಗಳಾಗಿವೆ. 41 ವಂದೇ ಭಾರತ್ ರೈಲುಗಳು ಓಡುತ್ತಿವೆ. ಮೆಡಿಕಲ್‌ ಕಾಲೇಜುಗಳ ಸಂಖ್ಯೆ 384 ರಿಂದ 700 ತಲುಪಿವೆ. ದೇಶದಲ್ಲಿ 74 ಇದ್ದ ವಿಮಾನ ನಿಲ್ದಾಣಗಳು ಇಂದು ವಿಜಯಪುರ ಸೇರಿ 154 ವಿಮಾನ ನಿಲ್ದಾಣಗಳಾಗಿವೆ. ಕೇವಲ 5 ನಗರಗಳಲ್ಲಿದ್ದ ಮೆಟ್ರೋ ಇಂದು 20 ನಗರಗಳಲ್ಲಿ ಮೆಟ್ರೋ ಸೇವೆ ಇದೆ. ಯುಪಿಎ ಅವಧಿಯಲ್ಲಿ 96 ಸಾವಿರ ಕಿ.ಮೀ‌ ಇದ್ದ ರಾಷ್ಟ್ರೀಯ ಹೆದ್ದಾರಿ ಇಂದು 1.50 ಲಕ್ಷ‌ ಕಿ.ಮೀ ನಷ್ಟು ಅಭಿವೃದ್ಧಿಯಾಗಿದೆ. 3.75 ಲಕ್ಷ ಕಿ.ಮೀ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಿವೆ. ಹೀಗೆ ಹತ್ತು ಹಲವು ಅಪರಿಮಿತ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.

ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಯಾವುದೇ ಒಡಕ್ಕಿಲ್ಲ. ದೇಶದ ರಕ್ಷಣೆ, ಏಲ್ಗೆಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಚುನಾವಣೆ ಮಾಡುತ್ತಿದ್ದೇವೆ. ಜಿಲ್ಲೆಯ ಮತದಾರರು ಪ್ರಬುದ್ಧರಾಗಿದ್ದಾರೆ. ವಿಜಯಪುರ ನಗರ ಮತಕ್ಷೇತ್ರದಲ್ಲಿ ಬಿಜೆಪಿ 25 ಸಾವಿರ ಲೀಡ್ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲಾ‌ ಜನತೆ ಮೇ 7 ರಂದು ಜರುಗುವ ಮತದಾನದಲ್ಲಿ ತಪ್ಪದೇ ಪಾಲ್ಗೊಂಡು ಬಿಜೆಪಿಗೆ ಮತ ಹಾಕಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತಯಾಚನೆ ಮಾಡಿದರು.

ಸಂಸದ‌ರು ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ಕಳೆದ 65 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ದೇಶದ ಏಲ್ಗೆಗೆ ಏನನ್ನು ಮಾಡದೇ ಕೇವಲ ತಮ್ಮ ಪಕ್ಷ ಹಾಗೂ ತಮ್ಮ ಮನೆ ತುಂಬಿಸಿಕೊಳ್ಳುವ ಕೆಲಸ ಮಾಡಿದ್ದರು‌. ಆದರೆ ಕಳೆದ 10 ವರ್ಷಗಳಲ್ಲಿ ಬಿಜೆಪಿ ಮಾಡಿದ ಸಾಧನೆ ಇಡಿ ವಿಶ್ವವೇ ಮೆಚ್ಚಿಕೊಂಡಿದೆ. ಜಗತ್ತಿನ 5 ಬಲಿಷ್ಠ ಆರ್ಥಿಕ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಿದೆ. ಬಿಜೆಪಿ‌ ಅವಧಿಯಲ್ಲಿ ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ 1 ಲಕ್ಷ ಕೋಟಿಯಷ್ಟು ಅನುದಾನ ತಂದಿದ್ದೇನೆ. ಜಿಲ್ಲೆಯ ಈ ಹಿಂದಿನ ಯಾವ ಕಾಂಗ್ರೆಸ್ ಸಂಸದರು ಮಾಡಲಾರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಎಲ್ಲಿಯೂ ಪ್ರಚಾರ ತೆಗೆದುಕೊಳ್ಳದೇ ಜನರ ಕಣ್ಣಲ್ಲಿ ಇರಬಾರದು, ಜನರ ಮನಸ್ಸಿನಲ್ಲಿರಬೇಕು ಎನ್ನುವಂತೆ ಕೆಲಸಗಳನ್ನು ಮಾಡಿದ್ದೇನೆ ಎಂದರು.

ಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೂ ಹೋರಾಟ ಮಾಡಿ ಸುಮಾರು
42 ಸಾವಿರ ಕೋಟಿ‌ ವೆಚ್ಚದ ಕೂಡಗಿ ಎನ್ಟಿಪಿಸಿ ಸ್ಥಾಪನೆ, ತೀವ್ರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ಇಂಡಿ‌ ಭಾಗದ ಸುಮಾರು‌76 ಹಳ್ಳಿಗಳಿಗೆ 120 ಕೋಟಿ‌ ಅನುದಾನದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ತಂದಿದ್ದೇನೆ.‌ ನಮ್ಮ‌ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರೈಲ್ಚೆ ವ್ಯವಸ್ಥೆ ಅಭಿವೃದ್ಧಿ, ವಿಮಾನ ನಿಲ್ದಾಣ ಹೀಗೆ ಹತ್ತು ಹಲವು ಜನಪರ ಕೆಲಸಗಳಾಗಿವೆ. ಇದು ನನ್ನ ಕಡೆಯ ಚುನಾವಣೆ. ಈ ಹಿಂದೆ ಮೋದಿಯವರು ಎರಡು ಬಾರಿ ಪ್ರಧಾನಿಯಾಗಲು ಜಿಲ್ಲೆಯ ಜನ ನನಗೆ ಕೈ ಎತ್ತಲು ಅವಕಾಶ ಮಾಡಿಕೊಟ್ಟಂತೆ ಮೋದಿಯವರಿಗಾಗಿ 3 ನೇ ಬಾರಿ ಕೈ ಎತ್ತಲು ಜನತೆ‌ ನನಗೆ ಅವಕಾಶ ಮಾಡಿಕೊಂಡಬೇಕೆಂದು ಕೇಳಿಕೊಳ್ಳುತ್ತೇನೆ. ಹಾಗೇ ಇದು ನನ್ನ ಜೀವನದ ಕೊನೆಯಾಸೆ ಎಂದು ಸಂಸದ ರಮೇಶ ಜಿಗಜಿಣಗಿ ಭಾವುಕ ಮಾತುಗಳಾಡಿದರು.

ಈ ವೇಳೆ ಮುಖಂಡರಾದ ವಿವೇಕಾನಂದ ಡಬ್ಬಿ, ಪಾಲಿಕೆ‌‌ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ‌ ಪ್ರ.ಕಾರ್ಯದರ್ಶಿ ಮಳುಗೌಡ ಪಾಟೀಲ, ನಗರ ಮಂಡಲ‌ ಅಧ್ಯಕ್ಷ ಶಂಕರ ಹೂಗಾರ ಹಾಗೂ ಸುರೇಶ್ ಬಿರಾದಾರ್, ಬಸವರಾಜ್ ಬೈಚಬಾಳ, ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮೀ ಕನ್ನೊಳ್ಳಿ, ರಾಹುಲ್ ಔರಂಗಬಾದ್, ಮಹೇಶ್ ಒಡೆಯರ, ಸುನಿಲ್ ಜೈನಾಪುರ, ಪ್ರಭು ಕೆಂಗಾರ, ಪ್ರವೀಣ್ ಕೂಡ್ಗಿ, ಪಾಪುಸಿಂಗ್ ರಜಪೂತ ಇತರರಿದ್ದರು.

error: Content is protected !!