ಕಲ್ಲಿನಿಂದ ಜಜ್ಜಿ ಭೀಕರ ಕೊಲೆ, ಯುವಕನ ಬರ್ಬರ ಹತ್ಯೆಗೆ ಕಾರಣವಾದರೂ ಏನು?
ಸರಕಾರ ನ್ಯೂಸ್ ವಿಜಯಪುರ
ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ರೋಹಿತ್ ಸುಭಾಶ ಪವಾರ (22) ಕೊಲೆಯಾದ ಯುವಕ.
ಹಣಕಾಸಿನ ವ್ಯವಹಾರಕ್ಕಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರೋಹಿತನ್ನುಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿ ಕೊಲೆಗಾರರು ಎಸ್ಕೇಪ್ ಆಗಿದ್ದಾರೆ. ಅಲ್ಲದೇ, ಸ್ಥಳದಲ್ಲಿ ಬಿಯರ್ ಬಾಟಲ್ ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ.
ಆಟವಾಡುತ್ತಾ ಮನೆಯಿಂದ ಹೋಗಿದ್ದ ಮಕ್ಕಳು ಶವವಾಗಿ ಪತ್ತೆ ! ಅಯ್ಯೋ…ಹೇಗಾಯ್ತು? ಏನಾಯ್ತು?
ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ರಿಶಿಕೇಶ ಸೋನಾವಣೆ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)