ವಿಜಯಪುರ

ಮತ ಎಣಿಕೆಗೆ ಜಿಲ್ಲಾಡಳಿತ ಸರ್ವ ಸನ್ನದ್ಧ, ಎಷ್ಟು ಸುತ್ತಿನಲ್ಲಿ ಎಣಿಕೆ ನಡೆಯಲಿದೆ ಗೊತ್ತಾ? ಇಲ್ಲಿದೆ ಡಿಟೇಲ್ಸ್‌

ಸರಕಾರ ನ್ಯೂಸ್‌ ವಿಜಯಪುರ

ಲೋಕಸಭೆ ಚುನಾವಣೆಯ ಏಳು ಹಂತಗಳ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ.

ವಿಜಯಪುರ ಎಸ್‌ಸಿ ಮೀಸಲು ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳವಾರ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಅದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ 14 ಟೇಬಲ್‌ಗಳಲ್ಲಿ ಒಟ್ಟು 154 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್‌ ತಿಳಿಸಿದ್ದಾರೆ.

ಮುದ್ದೇಬಿಹಾಳ-18, ದೇವರ ಹಿಪ್ಪರಗಿ-18, ಬಸವನ ಬಾಗೇವಾಡಿ-17, ಬಬಲೇಶ್ವರ-18, ವಿಜಯಪುರ ನಗರ- 21, ನಾಗಠಾಣ-22, ಇಂಡಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 20 ಸುತ್ತುಗಳು ಸೇರಿದಂತೆ ಒಟ್ಟು 154 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

ಕಲ್ಲಿನಿಂದ ಜಜ್ಜಿ ಭೀಕರ ಕೊಲೆ, ಯುವಕನ ಬರ್ಬರ ಹತ್ಯೆಗೆ ಕಾರಣವಾದರೂ ಏನು?

ಆಯಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಇಎಎಂ ಮತಯಂತ್ರಗಳ ಮತ ಎಣಿಕೆ ಕಾರ್ಯ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‌ಗಳಂತೆ ಒಟ್ಟು 8 ಮತಕ್ಷೇತ್ರಗಳಿಗೆ 112 ಟೇಬಲ್‌ಗಳಲ್ಲಿ ಹಾಗೂ ಅಂಚೆ ಮತಪತ್ರಗಳ ಎಣಿಕೆಗಾಗಿ 12 ಟೇಬಲ್ ಹಾಗೂ ಇಟಿಪಿಬಿಎಸ್ ಮತ ಪತ್ರಗಳ ಸ್ಕ್ಯಾನಿಂಗ್ ಕಾರ್ಯವನ್ನು 6 ಟೇಬಲ್‌ಗಳಲ್ಲಿ ಕೈಗೊಳ್ಳಲಾಗುತ್ತಿದೆ.

ಮತ ಎಣಿಕೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಓಟ್ಟು 483 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 12ಅಸಿಸ್ಟಂಟ್ ರಿಟರ್ನಿಂಗ್ ಅಧಿಕಾರಿ, 124 ಮೇಲ್ವಿಚಾರಕರು, 136 ಎಣಿಕೆ ಸಹಾಯಕರು, 124 ಮೈಕ್ರೋ ಅರ್ಬ್ಸರವರ್ ಹಾಗೂ 87 ಸಿಬ್ಬಂದಿೈನ್ನು ಕಾಯ್ದಿರಿಸಿದ ಸಿಬ್ಬಂದಿಯಾಗಿ ನಿಯೋಜಿಸಲಾಗಿದೆ.  ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಟ್ಯಾಬುಲೇಷನ್ ಹಾಗೂ ಆನಲೈನ್‌ನಲ್ಲಿ ದತ್ತಾಂಶ ಸಂಗ್ರಹಣೆಗೆ ಪ್ರತ್ಯೇಕವಾದ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಬ್ಯಾಂಕ್‌ ಖಾತೆಯಿಂದ 10 ಲಕ್ಷ ರೂ. ಗಾಯಬ್‌ !!! ಹುಷಾರ್‌ ! ನಿಮಗೂ ಬರಬಹುದು ಇಂಥ ಮೆಸೇಜ್‌!!!

ಮತ ಎಣಿಕೆ ಕೇಂದ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಬ್ಬರು ಡಿವೈಎಸ್‌ಪಿ, 4 ಸಿಪಿಐ, 10 ಪಿಎಸ್‌ಐ, 17 ಎಎಸ್‌ಐ, 92 ಸಿಪಿಸಿ, 78 ಹವಾಲ್ದಾರ್‌ಗಳನ್ನು ನಿಯೋಜಿಸಲಾಗಿದ್ದು, 1 ಸಿಐಎಸ್‌ಪಿ, 2 ಕೆಎಸ್‌ಆರ್‌ಪಿ-ಐಆರ್‌ಬಿ ಹಾಗೂ 3 ಸಿವಿಲ್ -ಡಿಎಆರ್ ತುಕಡಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಮೂಲಕ ಹದ್ದಿನ ಕಣ್ಣು ಇರಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿ ಟಿ. ಭೂಬಾಲನ್‌ ತಿಳಿಸಿದ್ದಾರೆ.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!