ಕುಲುಷಿತ ನೀರು ಸೇವಿಸಿ ಗ್ರಾಮಸ್ಥರು ಅಸ್ವಸ್ಥ, ಎಚ್ಚೆತ್ತುಕೊಳ್ಳದ ಆರೋಗ್ಯಾಧಿಕಾರಿಗಳ ವಿರುದ್ಧ ಭುಗಿಲೆದ್ದ ಜನಾಕ್ರೋಶ
ಸರಕಾರ ನ್ಯೂಸ್ ತಾಳಿಕೋಟಿ
ಮಳೆಗಾಲು ಶುರುವಾಗಿದ್ದು, ಶುದ್ಧ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿದೆ. ಪರಿಣಾಮ ಕಲುಷಿತ ನೀರು ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡ ಪ್ರಕರಣ ಬೆಳಕಿಗೆ ಬಂದಿದೆ.
ತಾಳಿಕೋಟಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕುಲಷಿತ ನೀರು ಸೇವನೆ ಹಿನ್ನೆಲೆ ಗ್ರಾಮದ ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಕಳೆದ ಎಂಟು ದಿನಗಳಿಂದ ಗ್ರಾಮದ ಜನರಲ್ಲಿ ಈ ಸಮಸ್ಯೆ ಕಾಡುತ್ತಿದೆ.
ಗ್ರಾಮದಲ್ಲಿ ಬಾವಿಯ ನೀರು ಕುಡಿಯಲು ಪೂರೈಕೆ ಮಾಡಲಾಗುತ್ತಿರುವುದೇ ಇದಕ್ಕೆಲ್ಲ ಕಾರಣ. ವಾಂತಿ ಬೇಧಿಯಿಂದ ಬಳಲುತ್ತಿರುವರಿಗೆ ತಾಳಿಕೋಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಮಾರು 30 ರಿಂದ 40 ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಸದ್ಯ ಮೂವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ.
ಸಮಸ್ಯೆಯಾಗಿದ್ದರೂ ಗ್ರಾಮಕ್ಕೆ ಬಾರದ ಆರೋಗ್ಯಾಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮದಲ್ಲಿನ ಸಮಸ್ಯೆ ಬಗೆ ಹರಿಸಬೇಕೆಂದು ಒತ್ತಾಯಿಸಿದ್ದಾರೆ. ಇನ್ನಾದರೂ ಆರೋಗ್ಯ ಅಧಿಕಾರಿಗಳು ಎಚ್ಚೆತ್ತುಕೊಂಡು ಬೇಟಿ ನೀಡುತ್ತಾರೋ ಇಲ್ಲವೋ ಕಾದು ನೋಡಬೇಕು. ಯಾವುದಕ್ಕೂ ಬೇರೆ ಬೇರೆ ಗ್ರಾಮಗಳಲ್ಲಿ ಇಂಥ ಸಮಸ್ಯೆ ಕಾಣಿಸಿಕೊಳ್ಳದಂತೆ ಮುಂಜಾಗೃತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಅಧಿಕಾರಿಗಳನ್ನು ತಲುಪುವವರೆಗೂ ಈ ಸುದ್ದಿ ಶೇರ್ ಮಾಡಿ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)