ಟಿ-20 ವಿಶ್ವಕಪ್ ಗೆದ್ದು ಬೀಗಿದ ಟೀಮ್ ಇಂಡಿಯಾ
ಸರಕಾರ ನ್ಯೂಸ್ ಡೆಸ್ಕ್: 2024ರ ಟಿ-20 ವಿಶ್ವಕಪ್ನ(World Cup) ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಅಲ್ಲದೇ, ಟೀಮ್ ಇಂಡಿಯಾ ಚಾಂಪಿಯನ್ ಆಗಿದೆ. ಬರೋಬ್ಬರಿ 11 ವರ್ಷಗಳ ನಂತರ ಭಾರತ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದುಕೊಂಡಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ-20 ಚಾಂಪಿಯನ್‌ಯಾಗಿ ಯಶಸ್ವಿಯಾಗಿದೆ.