ನಮ್ಮ ವಿಜಯಪುರ

ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ

ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಶಿವಾನಂದ ಮಾಸ್ತಿಹೊಳಿ ಇವರಿಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ವೈದ್ಯ ಪ್ರಶಸ್ತಿಯನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆೆಟ್ ಹಾಲ್‌ನಲ್ಲಿ ನಡೆದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿಗಳಾದ ಡಾ ಕೇಶರ್ ಸಿಂಗ್ ಗುಂಡಬಾವಡಿ ಇವರಿಗೆ ಉತ್ತಮ ಆರ್‌ಸಿಎಚ್ ವಿಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಕಣ್ಣಿನ ವಿಭಾಗದ ವೈದ್ಯರಾದ ಡಾ. ಮೀನಾಕ್ಷಿ ಮುತ್ತಪ್ಪನವರ್ ಅವರಿಗೆ ಉತ್ತಮ ವೈದ್ಯರೆಂದು ಹಾಗೂ ಇಂಡಿ ತಾಲೂಕಾ ವೈದ್ಯಾಧಿಕಾರಿಗಳಾದ ಡಾ ಅರ್ಚನಾ ಕುಲಕರ್ಣಿ, ಮುಳವಾಡ ವೈದ್ಯಾಧಿಕಾರಿಗಳಾದ ಡಾ. ನಂದಿನಿ ಇವರುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!