ಮೊಸರುನಾಡಿನಲ್ಲಿ ಆರು ಜನರು ನೀರು ಪಾಲು..?
ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರುಪಾಲಾಗಿದ್ದಾರೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ನದಿಯ ನಡುಗಡ್ಡೆಗೆ ತೆರಳಿ ವಾಪಸ್ಸು ಬರುತ್ತಿದ್ದಾಗ ತುಪ್ಪ ಮುಗುಚಿದೆ. ಸ್ಥಳಕ್ಕೆ ಭೇಟಿ ಕೊಲ್ಹಾರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್ ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.