ರಾಜ್ಯ ಸುದ್ದಿಶಿಕ್ಷಣ

ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅದಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗಿದೆ. ಇನ್ನೂ ಹಣಕಾಸು ಇಲಾಖೆ ಅನುಮತಿ ನೀಡಿದ ಬಳಿಕ ಅಧಿಸೂಚನೆ ಹೊರಗಡೆ ಬರಲಿದೆ. ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000, ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ.

error: Content is protected !!