ನಮ್ಮ ವಿಜಯಪುರ

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಅವಘಡ; 15 ಕಾರ್ಮಿಕರು ಜಸ್ಟ್ ಬಚಾವ್ !

ವಿಜಯಪುರ: ಕೃಷ್ಣಾ ತೀರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ಈ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ 15 ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಸುಕಿನ ಜಾವ ಚಹಾ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಈ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆಯೂ ಇಂಥದ್ದೇ ಅವಘಡ ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

error: Content is protected !!