ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಶೀಘ್ರದಲ್ಲಿಯೇ ಪ್ರಕ್ರಿಯೆ ಆರಂಭ, ಇಲ್ಲಿದೆ ಗುಡ್‌ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಿಕೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವರು, ಶೀಘ್ರದಲ್ಲಿಯೇ 10 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರ್ಥಿಕ ಇಲಾಖೆ ಒಪ್ಪಿಗೆ ಸಿಗುತ್ತಿದ್ದಂತೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಇರುವ ಕಾರಣ ಫಲಿತಾಂಶ ಕುಂಠಿತಗೊಳ್ಳುತ್ತಿದೆ. ಶಿಕ್ಷಣದ ಗುಣಮಟ್ಟ ಕುಸಿದಿದೆ. ಕಲ್ಯಾಣ ಕರ್ನಾಟಕ ಭಾಗವೊಂದರಲ್ಲಿಯೇ 19 ಸಾವಿರ ಶಿಕ್ಷಕರ ಕೊರತೆಯಿದೆ. ಕೊಠಡಿಗಳ ಸಮಸ್ಯೆಯೂ ಇದೆ. ಕಟ್ಟಡಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕಿದೆ ಎಂದು ಸದಸ್ಯ ಸಾಬಣ್ಣ ತಿಳಿಸಿದ್ದರು. ಅದಕ್ಕೆ ಸಚಿವರು ರಾಜ್ಯದಲ್ಲಿ ಒಟ್ಟು 50 ಸಾವಿರ ಶಿಕ್ಷಕರ ಕೊರತೆಯಿದೆ. ಆರ್ಥಿಕ ಇಲಾಖೆ ಅನುಮತಿ ಸಿಕ್ಕರೆ ಕೂಡಲೇ ಭರ್ತಿ ಮಾಡಿಕೊಳ್ಳಲಾಗುವುದು. ಅದಕ್ಕಾಗಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದಾರೆ.