ವಿಜಯಪುರ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಬೆಂಗಳೂರಿನಲ್ಲಿ ಮಾರ್ಚ್ 15 ಕ್ಕೆ ಸಭೆ, ಹೆಚ್ಚಿನ ಮಾಹಿತಿಗಾಗಿ ಈ ವರದಿ ಓದಿ….

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2A ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಹೋರಾಟಕ್ಕೆ ಒಂದು ವರ್ಷ ಗತಿಸಿದರೂ ಇಲ್ಲಿವರೆಗೂ ಮೀಸಲಾತಿಯನ್ನು ಸರ್ಕಾರ ಕೊಡದೆ ಇರುವುದು ವಿಷಾದನೀಯ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶಂಕರಗೌಡ ಬಿರಾದಾರ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು

ಮಾರ್ಚ್ 15ರಂದು ಮುಂದಿನ ಹೋರಾಟದ ರೂಪರೇಷೆಗಳ ಕುರಿತು ಚರ್ಚಿಸಲು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಸಭಾಂಗಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ದುಂಡುಮೇಜಿನ ಸಭೆಯನ್ನು ಆಯೋಜಿಸಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ನಡೆದ ಸಮಾಜದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ಪೂರ್ವದಲ್ಲಿ ಮೀಸಲಾತಿ ಕಲ್ಪಿಸುವುದಾಗಿ ಆಶ್ವಾಸನೆ ನೀಡಿದ್ದರು ಆದರೆ ಈಗ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ

ಈ ಸಭೆಯಲ್ಲಿ ನಮ್ಮ ಸಮಾಜದ ಪ್ರಥಮ ಜಗದ್ಗುರುಗಳಾದ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಸಾನಿಧ್ಯವಹಿಸುವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ಹಾಲಿ ಮತ್ತು ಮಾಜಿ ಶಾಸಕರು ಸಂಸದರು ಸಮಾಜದ ಮುಖಂಡರು ಮೀಸಲಾತಿ ಹೋರಾಟದ ಚಳುವಳಿಕಾರರು ಭಾಗವಹಿಸುವರು. ಆದಕಾರಣ ಸಮಾಜದ ಜಿಲ್ಲಾ ಅಧ್ಯಕ್ಷರು ತಾಲೂಕ ಘಟಕದ ಅಧ್ಯಕ್ಷರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ಮುಖಂಡರು ಸಭೆಗೆ ತಪ್ಪದೇ ಹಾಜರಾಗಬೇಕಾಗಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ. 9900777041ಕ್ಕೆ ಸಂಪರ್ಕಿಸಬಹುದು.

error: Content is protected !!