ಗೋಳಗುಮ್ಮಟ ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ
ವಿಜಯಪುರ: ಇಬ್ಬರು ಕಾನ್ಸಸ್ಟೇಬಲ್ಸ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗಲಾಟೆಗೆ ಸಂಬಂಧಿಸಿದ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡುವ ವಿಚಾರದಲ್ಲಿ ಆರೋಪಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹನುಮಂತ ಪೂಜಾರಿ, ಜಟ್ಟೆಪ್ಪ ಬಿರಾದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ನು 50 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಇಬ್ಬರು ಕಾನ್ಸಸ್ಟೇಬಲ್ಸ್‌ಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಟಿ ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ ಇನ್ಸ್ಪೆಕ್ಟರ್ ಆನಂದ ಠಕ್ಕನವರ, ಎ ಎ ಡೋಣಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.