ವಿಜಯಪುರ

ಚಲಿಸುತ್ತಿದ್ದ ಬಸ್ ನಿಂದ ಬಿದ್ದ ವಿದ್ಯಾರ್ಥಿ, ಹಿಂಬದಿ ಚಕ್ರದಡಿ ಸಿಲುಕಿದವನಿಗೆ ಏನಾಯಿತು?

ಸರಕಾರ ನ್ಯೂಸ್ ಸಿಂದಗಿ

ಚಲಿಸುತ್ತಿದ್ದ ಬಸ್ ನಿಂದು ಬಿದ್ದು ವಿದ್ಯಾರ್ಥಿ ಗಾಯಗೊಂಡ ಘಟನೆ
ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ ಎ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಬಸ್ ಮೂಲಕ ಶಾಲೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸಂದೀಪ ಶಿವಪ್ಪ ಗಿಡ್ಡನಗೋಳ ಗಾಯಗೊಂಡ ವಿದ್ಯಾರ್ಥಿ.

10 ನೇ ತರಗತಿ ಓದುತ್ತಿರುವ ಸಂದೀಪ
ಸಿಂದಗಿ ಪಟ್ಟಣದ ಎಚ್ ಜಿ ಹೈಸ್ಕೂಲ್ ನ ವಿದ್ಯಾರ್ಥಿಯಾಗಿದ್ದು, ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದಾನೆ. ಕೂಡಲೇ
ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಬನ್ನಿಹಟ್ಟಿ ಪಿ ಎ ಹಾಗೂ ಸಿಂದಗಿ ರಸ್ತೆ ತಡೆದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

error: Content is protected !!