ಇಂಡಿಯಲ್ಲಿ ಅನ್ನಭಾಗ್ಯ ಅಕ್ಕಿ ಜಪ್ತಿ | ಇಬ್ಬರ ವಿರುದ್ಧ ಕೇಸ್
ವಿಜಯಪುರ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ ಮನೆಯ ಕಟ್ಟಡದಲ್ಲಿ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಲಚ್ಯಾಣ ರಸ್ತೆಯಲ್ಲಿ ನಡೆದಿದೆ. ಉಸ್ಮಾನಗಣಿ ಮೋಮಿನ, ಪಪ್ಪು ಮೋಮಿನ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 1,24,700 ಮೌಲ್ಯದ 4300 ಕೆಜಿ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪೊಲೀಸರು ಪಡೆದುಕೊಂಡಿದ್ದಾರೆ. ಈ ಬಗ್ಗೆ ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.