ವಿಜಯಪುರ

ಅಂಗನವಾಡಿ ಬಾಲಕನ ಮೇಲೆ ಹರಿದ ಖಾಸಗಿ ಬಸ್, ಸಾವು

ವಿಜಯಪುರ: ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದ ಪರಿಣಾಮ ಬಾಲಕ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಸವರಾಜ್ ಮಂಜುನಾಥ ಚೋಪಡೆ (5) ಮೃತಪಟ್ಟಿರುವ ಬಾಲಕ. ಅಂಗನವಾಡಿಗೆ ಹೊರಟಿರುವಾಗ ರಸ್ತೆ ದಾಟುವ ವೇಳೆ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಡಿಕ್ಕಿಯಾಗಿದೆ. ಇನ್ನು ನಿಡಗುಂದಿಯ BMS ಶಾಲೆಯ ವಾಹನ ಇದಾಗಿದೆ.
ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

error: Content is protected !!