ಶಾಲೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕನ ಶವ ಪತ್ತೆ, ಅಯ್ಯಯ್ಯೋ…..ಏನಿದು ಘಟನೆ?
ಸರಕಾರ ನ್ಯೂಸ್ ಬ.ಬಾಗೇವಾಡಿ
ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆಯಾಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸಿ.ಎಸ್. ಹಡಪದ ಮೃತ ಮುಖ್ಯೋಪಾಧ್ಯಾಯ.
ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿತ್ತಿದ್ದ ಇವರು ಶಾಲಾ ಅವಧಿ ಮುಗಿದ ಬಳಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಾವಿನ ಕುರಿತು ಕುಟುಂಬಸ್ಥರು ಹಾಗೂ ಶಿಕ್ಷಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರ ಕಿರುಕುಳ ಆರೋಪ ಕೇಳಿ ಬಂದಿದೆ.
ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತ ವಾಗಿದ್ದು ಈ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯ ಕೇಳಿ ಬರುತ್ತಿದೆ.
ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ.