ರಾಜ್ಯ

ಕೃಷ್ಣೆಯ ಜಲಧಿಗೆ ಬಾಗಿನ ಅರ್ಪಣೆ

ವಿಜಯಪುರ: ಮೈದುಂಬಿ ಹರಿಯುತ್ತಿರುವ ಕೃಷ್ಣೆಯ ಜಲಧಿಗೆ ಸಿಎಂ ಸಿದ್ದರಾಮಯ್ಯ ಬುಧವಾರ ಬಾಗಿನ ಅರ್ಪಿಸಿದರು. ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಸಾಥ್ ನೀಡಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ‌. ತಿಮ್ಮಾಪುರ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಜಯಾನಂದ ಕಾಶಪ್ಪನವರ, ಅಶೋಕ ಮನಗೂಳಿ, ವಿಪ ಸದಸ್ಯ ಪ್ರಕಾಶ ರಾಠೋಡ ಮತ್ತಿತರರು ಇದ್ದರು.

error: Content is protected !!