ರಾಜ್ಯ

“ಮಹಾ” ಸರ್ಕಾರದ ವಿರುದ್ಧ ಬಿಜ್ಜರಗಿ ಸಿಡಿಮಿಡಿ.. ಯಾಕೆ ಗೊತ್ತಾ..?

ವಿಜಯಪುರ: ಮಹಾರಾಷ್ಟ್ರದ ಗಡಿನಾಡ ಕನ್ನಡಿಗರ ಮಕ್ಕಳು ಓದುತ್ತಿರುವ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಮಹಾರಾಷ್ಟ್ರ ಸರ್ಕಾರ ಕನ್ನಡದಲ್ಲಿ ನಲಿಕಲಿ ಪಠ್ಯಪುಸ್ತಕಗಳನ್ನು ಪೂರೈಸುತ್ತಿಲ್ಲ. ಈ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ಆ.26 ರಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವುದಾಗಿ ಎಂದು ಯುವ ವಿಕಾಸ ಸಂಗಮ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಬಿಜ್ಜರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಗಡಿನಾಡ ಕನ್ನಡಿಗರ ಮಕ್ಕಳು ಓದುತ್ತಿರುವ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಮಹಾರಾಷ್ಟ್ರ ಸರ್ಕಾರ ಕನ್ನಡದಲ್ಲಿ ನಲಿಕಲಿ ಪಠ್ಯಪುಸ್ತಕಗಳನ್ನು ಪೂರೈಸುತ್ತಿಲ್ಲ. ಈ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ಆ.26 ರಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವುದಾಗಿ ಎಂದು ಯುವ ವಿಕಾಸ ಸಂಗಮ ಸಂಘಟನೆ ತಿಳಿಸಿದೆ. ಇದೇ ವಿಷಯವಾಗಿ ಆ.26 ರಂದು ವಿಜಯಪುರ ನಗರದಲ್ಲಿ ಪ್ರತಿಭಟನೆಯ ನಡೆಸಿ ಜಿಲ್ಲಾಡಳಿತದ ಮೂಲಕ ಎರಡೂ ರಾಜ್ಯಗಳ ಸರ್ಕಾರಗಳಿಗೆ ಮನವಿ ಮಾಡಲಿದ್ದೇವೆ. ಒಂದೊಮ್ಮೆ ನಿರ್ಲಕ್ಷಿಸಿದರೆ ಈ ಕುರಿತು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಸಂಘಟನೆಯ ಪ್ರಮುಖರಾದ ಪ್ರಕಾಶ ಮೇಟಿ, ಪ್ರವೀಣ ಕುರ್ಲೆ, ಸಚಿನ್ ಗದ್ಯಾಳ, ರಾಜಕುಮಾರ ಘೌಂಡಿ ಇತರರು ಉಪಸ್ಥಿತರಿದ್ದರು.

error: Content is protected !!