ವಿಜಯಪುರ

ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನ ಎಂದು ಗೊತ್ತಾ?

ಸರಕಾರ ನ್ಯೂಸ್‌ ವಿಜಯಪುರ

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ, ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ,ಗ್ರಾಮ ಪಂಚಾಯತ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 5ರಂದು ಪ್ರಕಟಿಸಲಾಗಿದೆ.

ಈ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ-

ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ, ಯಾರು ಎಲ್ಲಿ ನಿಯೋಜನೆಗೊಂಡಿದ್ದಾರೆ ಇಲ್ಲಿದೆ ಡಿಟೇಲ್ಸ್

ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕಾ ಕಚೇರಿಯಲ್ಲಿ 07 ದಿನಗಳ (ದಿನಾಂಕ:11-09-2024ರೊಳಗಾಗಿ) ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ವೆಬ್‌ಸೈಟ್ https://vijayapura.nic.in ದಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!