ನಾಲ್ವರ ಬಲಿ ತೆಗೆದುಕೊಂಡ ಬೈಕ್ ವ್ಹೀಲಿಂಗ್ ಕ್ರೇಜ್….ಅಯ್ಯಯ್ಯೋ ಏನಪ್ಪಾ ಈ ಅನಾಹುತ? ಎಲ್ಲಿ? ಹೇಗಾಯಿತು?
ಸರಕಾರ ನ್ಯೂಸ್ ಮುದ್ದೇಬಿಹಾಳ
ಬೈಕ್ ವ್ಹೀಲಿಂಗ್ ಕ್ರೇಜಿಗೆ ನಾಲ್ವರು ಬಲಿಯಾಗಿ, ಇಬ್ಬರು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.
ಮುದ್ದೇಬಿಹಾಳದ ಕುಂಟೋಜಿ ಗ್ರಾಮದ ಹತ್ತಿರದ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದವರು ಎನ್ನಲಾಗಿದ್ದು, ಅನೀಲ ಖೈನೂರ (23), ಪ್ರಯತ್ನ ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತರೆಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಶಸಾಹೀದ ಹುನಗುಂದ ಹಾಗೂ ಪ್ರಶಾಂತ ಕುರುಬಗೌಡರ ಗಾಯಾಳು ಆಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ವಿವಿಧ ಶಕ್ತಿ ಪ್ರದರ್ಶನದ ಸ್ಪರ್ಧೆಗಳನ್ನು ನೋಡಲು ಸೇರಿದ್ದ ಸುತ್ತಲಿನ ಹಳ್ಳಿಗಳ ಯುವಕರ ಮೇಲೆ ಬೈಕ್ ವ್ಹೀಲಿಂಗ್ ಮಾಡುತ್ತಾ ಕೆಲವರು ಬಂದಿದ್ದಾರೆ.
ಬೈಕ್ ಆಯತಪ್ಪಿದ ಪರಿಣಾಮ ಬೈಕ್ ಸವಾರರೂ ಸೇರಿ ಮೂವರು ತಲೆಗೆ ಭಾರೀ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದರು. ನಾಲ್ವರಿಗೆ ಗಾಯಗಳಾಗಿದ್ದವು. ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದು ಪ್ರಕರಣ ದಾಖಲಾಗಿದೆ.
ಮೃತರಲ್ಲಿ ಇಬ್ಬರನ್ನು ಮಲಗಲದಿನ್ನಿಯ ರಾಯಪ್ಪ ಬಾಗೇವಾಡಿ,
ಹಣಮಂತ್ರಾಯ ಕುರುಬಗೌಡ್ರ ಎಂದು ಗುರ್ತಿಸಲಾಗಿದೆ. ಇನ್ನಿಬ್ಬರು ಹೆಸರು ತಿಳಿದುಬಂದಿಲ್ಲ.