ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ, ಕಾರಣ ಏನು?
ಸರಕಾರ ನ್ಯೂಸ್ ಮುದ್ದೇಬಿಹಾಳ
ಯುವತಿಯೋರ್ವಳು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಶವ ತೆಗೆಯುವ ಕಾರ್ಯಾಚರಣೆ ಆರಂಭಗೊಂಡಿದೆ.
ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಳಿಯ ಸೇತುವೆ ಮೇಲಿಂದ ಯುವತಿ ನದಿಗೆ ಹಾರಿದ್ದಾಳೆ. ಕಳೆದ ಸೆ. 14 ರಂದೇ ಈ ಘಟನೆ ನಡೆದಿದ್ದು, ಇದೀಗ ಕಾರ್ಯಾಚರಣೆ ಚುರುಕುಗೊಂಡಿದೆ.
ಅಂದಹಾಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ ನೆರೆಯ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಬಾಲವ್ವ ಕಮರಿ ಎನ್ನಲಾಗಿದೆ.
ಯುವತಿ ಶವ ಪತ್ತೆಗೆ ಎರಡು ದಿನಗಳಿಂದ ಪ್ರಯತ್ನಿಸುತ್ತಿರುವ ಅಗ್ನಿಶಾಮಕ ದಳ ಸಿಬ್ಬಂದಿಗೆ ಈವರೆಗೆ ಶವ ಪತ್ತೆಯಾಗಿಲ್ಲ. ಇದೀಗ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗಿದೆ.
ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ನುರಿತ ಈಜು ಪಟುಗಳು ನದಿಗೆ ಇಳಿದಿದ್ದಾರೆ. ಬೋಟ್ ಸಹಾಯದಿಂದ ಶವ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮುದ್ದೇಬಿಹಾಳ ಪೊಲೀಸ್ ರು ಠಿಕಾಣಿ ಹೂಡಿದ್ದಾರೆ.