ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ: ಪರಿಶೀಲನೆ
ವಿಜಯಪುರ: ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು. ತಹಶೀಲ್ದಾರ ಕಚೇರಿಯ ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇಂಡಿ ಮೆಘಾ ಮಾರುಕಟ್ಟೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಬಿ.ಎಸ್.ಕಡಕಬಾವಿ, ಪರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಇತರರು ಉಪಸ್ಥಿತರಿದ್ದರು.